Dr C P Ravikumar

ಕ್ಲೋನಾಜೆಪಮ್

ಪೋಷಕರ ಅಥವಾ ರೋಗಿಯ ಮಾಹಿತಿ ಕೈಪಿಡಿ

 
 

ಡಾ ಸಿ ಪಿ ರವಿ ಕುಮಾರ್

ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ
MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)
ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)

ಬ್ರ್ಯಾಂಡ್ ಹೆಸರುಗಳು

ಮಾತ್ರೆ: ಲೋನ್ ಜೆನ್, ಪೆಟ್ರಿಲ್

“ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು”

ಕ್ಲೋನಾಜೆಪಮ್ ಎಂಬುದು ಅಪಸ್ಮಾರದ ಚಿಕಿತ್ಸೆಯಲ್ಲಿ ವಿವಿಧ ಬಗೆಯ ಸೆಳೆವುಗಳನ್ನು (ಫಿಟ್ಸ್) ನಿಯಂತ್ರಿಸಲು ಬಳಸಲಾಗುವ ಔಷಧಿ. ಮ್ಯೊಕ್ಲೊನಿಕ್ ಸೆಳೆವು (ಫಿಟ್ಸ್), ಅಟೋನಿಕ್ ಸೆಳೆವು, ಅನುಪಸ್ಥಿತಿ ಸೆಳೆವು ಮತ್ತು ಇದನ್ನು ಇತರೆ ಬಗೆಯ ಅಪಸ್ಮಾರ ಚಿಕಿತ್ಸೆಯಲ್ಲಿ ಹೆಚ್ಚುವರಿ ಔಷಧಿಯಾಗಿ ಬಳಸಲಾಗುತ್ತದೆ.

ನನ್ನ ಮಗು ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?

ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗುವು ನಿಯಮಿತವಾಗಿ ಕ್ಲೋನಾಜೆಪಮ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.

ನಿಮ್ಮ ಮಗುವಿಗೆ ಕ್ಲೋನಾಜೆಪಮ್ ನೀಡುವುದನ್ನುದಿಢೀರನೆನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.

ಕ್ಲೋಬಜಮ್ ಯಾವ ರೂಪದಲ್ಲಿ ಲಭ್ಯವಿದೆ?

ಮಾತ್ರೆಗಳು, ಮತ್ತು ಸುಲಭವಾಗಿ ಬಾಯಲ್ಲಿ ಕರಗುವಂತಹ ಮಾತ್ರೆಗಳು

ಕ್ಲೋನಾಜೆಪಮ್ ಅನ್ನು ಯಾವಾಗ ನೀಡಬೇಕು?

ಸಾಮಾನ್ಯವಾಗಿ ಕ್ಲೋನಾಜೆಪಮ್ ಅನ್ನು ರಾತ್ರಿ ವೇಳೆ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಆದರೆ, ಕೆಲವು ಬಾರಿ ನಿಮ್ಮ ವೈದ್ಯರು ದಿನಕ್ಕೆ ಎರಡು ಬಾರಿ ಅಂದರೆ ಬೆಳಗ್ಗೆ ಮತ್ತು ಸಂಜೆ ತೆಗೆದುಕೊಳ್ಳುವಂತೆಯೂ ಸಹ ಸೂಚಿಸಬಹುದು. ದಯವಿಟ್ಟು ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ.

ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.

ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?

ಮಾತ್ರೆಗಳು: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.

ಬಾಯಿಯಲ್ಲಿ ಕರಗುವಂತಹವು: ಇವು ಬಾಯಿಯಲ್ಲಿ ಕರಗುವಂತಹ ಮಾತ್ರೆಗಳಾಗಿದ್ದು, ನುಂಗುವ ಅಗತ್ಯವಿಲ್ಲ.

ಯಾವುದೇ ಕಾರಣಕ್ಕೂ ಎರಡು ಡೋಸ್ ಕ್ಲೋನಾಜೆಪಮ್ ನೀಡಬೇಡಿ.

ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗು ಔಷಧಿ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.

ಔಷಧಿಯ ಪ್ರಮಾಣ ಎಷ್ಟಿರಬೇಕು?

ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಕ್ಲೋನಾಜೆಪಮ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.

ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕ್ಲೋನಾಜೆಪಮ್ ನೀಡಿ. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ಇದಕ್ಕೆ ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನು ನಿಮ್ಮ ವೈದ್ಯರು ವಿವರಿಸುತ್ತಾರೆ.

ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ

ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.

ಔಷಧಿಯನ್ನು ಹೇಗೆ ನೀಡಬೇಕು? ? ಔಷಧಿಗಳನ್ನು ನೀಡುವುದು”

ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು ಅಥವಾ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.

ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”

ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಕೆಲವೊಮ್ಮೆ ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು. ಅಡ್ಡ ಪರಿಣಾಮಗಳನ್ನು ಕುರಿತು ಮಾಹಿತಿ ಪತ್ರವನ್ನು ದಯವಿಟ್ಟು ಓದಿ.

ನಿಮ್ಮ ಚಿಂತೆಗೆ ಕಾರಣವಾಗಬಹುದಾದ ಅಡ್ಡಪರಿಣಾಮಗಳುಅಪರೂಪ

ನಿಮ್ಮ ಮಗುವು ಅಸಾಮಾನ್ಯ ಎನಿಸುವಷ್ಟು ನಿದ್ರಿಸಬಹುದು, ಅಥವಾ ಅವರ ವರ್ತನೆಯ ಬದಲಾಗಬಹುದು, ಸಾಮಾನ್ಯವಾಗಿ ಇದು ಶಾಶ್ವತವಾಗಿರುವುದಿಲ್ಲ.

ಮಗುವು ಉರುಳಾಡುವುದು ಅಥವಾ ಅತಿಯಾಗಿ ಜೊಲ್ಲು ಸುರಿಸುವುದು ಕಂಡು ಬರಬಹುದು. ಆದರೆ, ಇವು ಸಹ ಶಾಶ್ವತವಾಗಿರುವುದಿಲ್ಲ.

ಯಕೃತ್ತಿನ ಕಾಯಿಲೆ: ಯಕೃತ್ತಿನ ಕಿಣ್ವಗಳ ಬಗ್ಗೆ ನಿಯಮಿತವಾಗಿ ಲಕ್ಷ್ಯವಿಡಬೇಕು. ಪಿತ್ತಜನಕಾಂಗದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ, ತಕ್ಷಣವೇ ಔಷಧ ಸೇವನೆಯನ್ನು ನಿಲ್ಲಿಸಬೇಕು. ನಿಮ್ಮ ಮಗು ಪ್ರತಿ ಕೆಲವು ಗಂಟೆಗಳಿಗೊಮ್ಮೆ ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭಿಸಿದಲ್ಲಿ, ಅಥವಾ ಹೊಟ್ಟೆ ನೋವು, ತುಂಬಾ ನಿದ್ರೆ, (ಚರ್ಮ ಅಥವಾ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ) ಅಥವಾ ಕಾಮಾಲೆ ಉಂಟಾದರೆ, ಸಾಮಾನ್ಯಕ್ಕಿಂತ ಹೆಚ್ಚು ಬಾರಿ ಫಿಟ್ಸ್ ಗೆ ಒಳಗಾಗುತ್ತಿದ್ದಲ್ಲಿ, ಅವರನ್ನು ನಿಮ್ಮ ವೈದ್ಯರಿಗೆ ತೋರಿಸಿ ಅಥವಾ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯಿರಿ.

ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ.

ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಈ ಎಲ್ಲಾ ಅಡ್ಡಪರಿಣಾಮಗಳ ಹೊರತಾಗಿಯೂ ಕ್ಲೋನಾಜೆಪಮ್ ಅಪಸ್ಮಾರಕ್ಕೆ ಪರಿಣಾಮಕಾರಿಯಾದ ಔಷಧಿ. ಹಾಗೂ ಮಗುವಿನ ಎಚ್ಚರ, ವರ್ತನೆ ಮತ್ತು ಸಾಮರ್ಥ್ಯಗಳ ಮೇಲೆ ತುಂಬಾ ಕಡಿಮೆ ಪರಿಣಾಮ ಹೊಂದಿದೆ.

ಕ್ಲೋನಾಜೆಪಮ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?

  • ನೀವು ಮಗುವಿಗೆ ಪ್ಯಾರಸಿಟಮಾಲ್, ಆಂಟಿಬಯಾಟಿಕ್ಸ್ ಅಥವಾ ಐಬುಪ್ರೊಫೇನ್ ಔಷಧಿಗಳನ್ನು ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ಮಗುವಿಗೆ ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.
  • ನಿಮ್ಮಮಗುವಿಗೆಬೇರೆಔಷಧಿಗಳನ್ನುನೀಡುವಮೊದಲುನಿಮ್ಮವೈದ್ಯರನ್ನೊಮ್ಮೆಸಂಪರ್ಕಿಸಿ. ಅದುಗಿಡಮೂಲಿಕೆಅಥವಾಪೂರಕಔಷಧಿಗಳಾಗಿದ್ದರೂಸಹವೈದ್ಯರಸಲಹೆಇಲ್ಲದೆಮುಂದುವರೆಯಬೇಡಿ.
  • ಅಪಸ್ಮಾರಕ್ಕೆ ಚಿಕಿತ್ಸೆ ನೀಡಲು ಬಳಸುವ ಇತರ ಕೆಲವು ಔಷಧಿಗಳು ಕ್ಲೋನಾಜೆಪಮ್ ನಷ್ಟೇ ಉತ್ತಮವಾಗಿ ಕೆಲಸ ಮಾಡಬಹುದು ಅಥವಾ ಅಡ್ಡಪರಿಣಾಮಗಳಿಗೂ ಕಾರಣವಾಗಬಹುದು. ಹಾಗಾಗಿ, ಇತರೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ವೈದ್ಯರ ಗಮನಕ್ಕೆ ತನ್ನಿ. ಅಡ್ಡಪರಿಣಾಮಗಳ ಬಗ್ಗೆ ನಿಮಗೆ ಆತಂಕವಿದ್ದಲ್ಲಿ ಅಥವಾ ನಿಮ್ಮ ಮಗುವಿಗೆ ಹೆಚ್ಚು ಬಾರಿ ಫಿಟ್ಸ್ ಬರುತ್ತಿದ್ದಲ್ಲಿ, ವೈದ್ಯರನ್ನು ಸಂಪರ್ಕಿಸಿ.

ಕ್ಲೋನಾಜೆಪಮ್ ಮತ್ತು ಗರ್ಭಧಾರಣೆ
ಈ ಔಷಧಿಯನ್ನು ಗರ್ಭಾವಸ್ಥೆಯಲ್ಲಿ ಬಳಸಿದಾಗ ’ನವಜಾತ ಶಿಶು ಹಿಂತೆಗೆದುಕೊಳ್ಳುವ ಸಿಂಡ್ರೋಮ್”ನ ಅಪಾಯವಿರುತ್ತದೆ. ಇದು ಉಸಿರಾಟದ ಸಮಸ್ಯೆಗೆ ಕಾರಣವಾಗಬಹುದು. ನಿಮ್ಮ ನರಶಾಸ್ತ್ರಜ್ಞರೊಂದಿಗೆ ಮಾತನಾಡಿ ಮತ್ತು ಗರ್ಭಧರಿಸುವ ಮೊದಲು ನೀವು ಸೇವಿಸುವ ಔಷಧಿಗಳನ್ನು ಪರಿಶೀಲಿಸಿ.

ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?

ಔಷಧಿಯನ್ನು

  • ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನುಫ್ರಿಡ್ಜ್‌ನಲ್ಲಿ ಇಡುವ ಅವಶ್ಯಕತೆ ಇಲ್ಲ.
  • ಮಕ್ಕಳು ಔಷಧಿಯನ್ನು ನೋಡದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.
  • ಖರೀದಿಸಿ ತಂದ ಬಾಕ್ಸ್ ನಲ್ಲಿಯೇ ಇಡಿ.

ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.

ಉಲ್ಲೇಖಗಳು:

  1. ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್‌ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
  2. ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
  3. ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್‌ಎಫ್‌ಸಿ)
  4. ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ; https://www.fda.gov
Picture of Dr C P Ravikumar

Dr C P Ravikumar

CONSULTANT – PEDIATRIC NEUROLOGY
Aster CMI Hospital, Bangalore