Dr C P Ravikumar

ಡಾ ಸಿ ಪಿ ರವಿ ಕುಮಾರ್

ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ
MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)
ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)

ಬ್ರ್ಯಾಂಡ್ ಹೆಸರುಗಳು

ಮಾತ್ರೆ: ಲೋನ್ ಜೆನ್, ಪೆಟ್ರಿಲ್

“ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು”

ಮೆಲಟೋನಿನ್ ನಿದ್ರೆಯನ್ನು ಸುಗಮಗೊಳಿಸಲು ಬಳಸುವ ಔಷಧವಾಗಿದೆ. ಬೆಳವಣಿಗೆ ನ್ಯೂನತೆ, ಸೆಳೆತ ಮತ್ತು ಮೆದುಳಿನ ನಿಸ್ಸಸ್ವತೆ ಹೊಂದಿರುವ ಮಕ್ಕಳಲ್ಲಿ ನಿದ್ರಾ ನ್ಯೂನತೆಯು ಸಾಮಾನ್ಯವಾದುದ್ದು. ಅಂತಹ ಮಕ್ಕಳಲ್ಲಿ ಮೆಲಟೋನಿನ್ ಔಷಧಿಯು ಅವರು ನಿದ್ರಿಸಲು ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ, ನಿದ್ರೆಯಿಂದ ಸುಲಭವಾಗಿ ಎಚ್ಚರಗೊಳ್ಳುವವರಿಗೆ ಅಥವಾ ನಿದ್ರಾಹೀನತೆಯ ಸಮಸ್ಯೆಯುಳ್ಳವರಿಗೆ ಇದರಿಂದ ಯಾವುದೇ ಉಪಯೋಗವಿಲ್ಲ.

ನಿದ್ರೆಯು ಮನುಷ್ಯನ ಅತ್ಯಗತ್ಯ ಚಟುವಟಿಕೆಗಳಲ್ಲೊಂದು. ನಿದ್ರಾ ಸಮಯದಲ್ಲಿ ದೇಹವು ತನ್ನಿಂದತಾನೇ ಹೊಸ ಚೈತನ್ಯ ಪಡೆದುಕೊಳ್ಳುತ್ತದೆ. ಈ ಸಮಯದಲ್ಲಿ ಉಂಟಾಗುವ ಯಾವುದೇ ರೀತಿಯ ತೊಂದರೆಯು ಕಲಿಕಾ ಪ್ರಕ್ರಿಯೆ ಹಾಗೂ ಸಹಜ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ.

ಮೆಲಾಟೋನಿನ್ ಎಂಬುದು ಮೆದುಳಿನ ಪಿನಾಲ್‌ಗ್ರಂಥಿಯಲ್ಲಿ ಉತ್ಪತ್ತಿಯಾಗುವ ಸಹಜ ಹಾರ್ಮೋನಾಗಿದ್ದು, ಮೊಬೈಲ್ ಮತ್ತುಇತರೆ ಡಿಜಿಟಲ್ ಸಾಧನಗಳ ಬಳಕೆಯು ಇದರ ಉತ್ಪಾದನೆ ಮತ್ತು ನಿದ್ರಾಚಕ್ರದ ಮೇಲೆ ಪರಿಣಾಮ ಬೀರುತ್ತದೆ. ಸೂರ್ಯ ಮುಳುಗುತ್ತಿದ್ದಂತೆ, ಕಣ್ಣನ್ನು ಪ್ರವೇಶಿಸುವ ನೈಸರ್ಗಿಕ ಬೆಳಕಿನ ಪ್ರಮಾಣ ಕಡಿಮೆಯಾಗುತ್ತದೆ. ಈ ಕ್ರಿಯೆಯು ಮೆಲಟೋನಿನ್ ಅನ್ನು ಸ್ರವಿಸಲು ಪೀನಲ್ ಗ್ರಂಥಿಯನ್ನು ಉತ್ತೇಜಿಸುತ್ತದೆ. ಈ ಮೆಲಟೋನಿನ್ ನಮ್ಮ ದೇಹದ ಅನೇಕ ಚಟುವಟಿಕೆಗಳನ್ನು ನಿಧಾನಗೊಳಿಸುತ್ತದೆ. ಮಾತ್ರವಲ್ಲದೆ, ನಮಗೆ ನಿದ್ರೆಯನ್ನ್ನು ಉಂಟು ಮಾಡುವ ಮೂಲಕ ನಮ್ಮ ದೇಹವನ್ನು ಸಹಜ ನಿದ್ರೆಗೆ ಸಿದ್ಧಗೊಳಿಸುತ್ತದೆ. ಇದು ನಿದ್ರೆ ಮತ್ತು ಎಚ್ಚರಗೊಳ್ಳುವ ನೈಸರ್ಗಿಕ ಚಕ್ರ. ಮೆಲಟೋನಿನ್ ಔಷಧಿಯ ಸಂಶ್ಲೇಷಿತ ತಯಾರಿಕೆಯು (ಔಷಧಿ) ನಮ್ಮ ದೇಹದಲ್ಲಿ ಮೆಲಟೋನಿನ್ ಉತ್ಪತ್ತಿಯಾಗುವ ಕ್ರಿಯೆಯನ್ನು ಹೆಚ್ಚಿಸಲು (ಬಲಪಡಿಸಲು) ಸಹಾಯ ಮಾಡುತ್ತದೆ.

ನನ್ನ ಮಗು ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?

ಮಕ್ಕಳಿಗೆ ನಿದ್ರಾ ಸಮಸ್ಯೆಗಳಿದ್ದರೆ ಅಂದರೆ ನಿದ್ರೆ ಮಾಡಲು ಸಾಧ್ಯವಾಗದ ಅಥವಾ ಕೆಲವೇ ಗಂಟೆಗಳ ಕಾಲ ಮಾತ್ರ ನಿದ್ರಿಸುವ ಮಕ್ಕಳಿಗೆ ಮೆಲಟೋನಿನ್ ಅನ್ನು ಸೂಚಿಸಲಾಗುತ್ತದೆ. ಸಾಮಾನ್ಯವಾಗಿ, ನಿದ್ರಾ ಚಕ್ರವನ್ನು ಮರುಹೊಂದಿಸಲು ಉತ್ತಮ ಆರೋಗ್ಯಕರ ನಿದ್ರೆಯನ್ನು ಹೊಂದಿರುವುದು ಬಹಳ ಮುಖ್ಯ (ಆರೋಗ್ಯಕರ ನಿದ್ರೆಯ ಬಗ್ಗೆ ಓದಿ). ಇದು ನಿದ್ರೆಯ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ ಎಂದು ನಿಮಗನಿಸಿದರೆ, ಅಂತಹ ಸಂದರ್ಭಗಳಲ್ಲಿ ಮೆಲಟೋನಿನ್ ನಂತಹ ಔಷಧಿಗಳಿಂದ ನಿಮಗೆ ಪ್ರಯೋಜನವಾಗಬಹುದು.

ಮೆಲಟೋನಿನ್ ಯಾವ ರೂಪದಲ್ಲಿ ಲಭ್ಯವಿದೆ?

ದ್ರವ ರೂಪ (ಮತ್ತು ಮಾತ್ರೆಗಳ ರೂಪ) ದಲ್ಲಿ ಲಭ್ಯವಿದೆ.

ಮೆಲಟೋನಿನ್ ಅನ್ನು ಯಾವಾಗ ನೀಡಬೇಕು?

ಮೆಲಟೋನಿನ್ ಅನ್ನು ನೀಡಿದ 30 ರಿಂದ 45 ನಿಮಿಷಗಳ ನಂತರ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಆದ್ದರಿಂದ, ನಿಮ್ಮ ನಿದ್ರಾ ಸಮಯಕ್ಕೆ 30 ನಿಮಿಷಗಳ ಮೊದಲು ನೀಡಿ.

ನನ್ನ ಮಗು ಮಲಗಿದೆ. ನಾನು ಮೆಲಟೋನಿನ್ ನೀಡಬೇಕೇ?

ಇಲ್ಲ, ಒಂದು ವೇಳೆ ಮಗು ಎಚ್ಚರಗೊಂಡು ನೀವು ಅವನನ್ನು ಎಂದಿನಂತೆ ಸಹಜವಾಗಿ ಮಲಗಿಸಲು ಸಾಧ್ಯವಾಗದಿದ್ದರೆ, ಅಂತಹ ಸಮಯದಲ್ಲಿ ನೀವು ಮೆಲಟೋನಿನ್ ಅನ್ನು ನೀಡಬಹುದು.

ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?

ನಿಮ್ಮ ಮಗು ಈಗಾಗಲೇ ಮಲಗಿದ್ದರೆ, ತೊಂದರೆಯಿಲ್ಲ. ಆದರೆ, ಮಗುವು ಎಚ್ಚರವಾಗಿದ್ದರೆ ಔಷಧಿಯನ್ನು ನೀಡಿ.

ಮೆಲಟೋನಿನ್ ನೀಡಿದ ನಂತರ ನನ್ನ ಮಗು ವಾಂತಿ ಮಾಡಿದರೆ ಏನು ಮಾಡಬೇಕು?

ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗುವು ಔಷಧಿ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.

ಔಷಧಿಯ ಪ್ರಮಾಣ ಎಷ್ಟಿರಬೇಕು?

ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಮೆಲಟೋನಿನ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.

ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ

ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.

ಔಷಧಿಯನ್ನು ಹೇಗೆ ನೀಡಬೇಕು? ? ಔಷಧಿಗಳನ್ನು ನೀಡುವುದು”

ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು ಅಥವಾ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.

ದ್ರವ ಅಥವಾ ಸಿರಪ್: ಓರಲ್ ಸಿರಿಂಜ್ ಅಥವಾ ಔಷಧಿ ಚಮಚದಿಂದ ಸರಿಯಾದ ಪ್ರಮಾಣದ ಔಷಧಿಯನ್ನು ಅಳತೆ ಮಾಡಿಕೊಳ್ಳಿ. ಇದನ್ನು ಔಷಧಿ ಅಂಗಡಿಗಳಲ್ಲಿ ಖರೀದಿಸಬಹುದು. ಅಡುಗೆಮನೆಯಲ್ಲಿ ಬಳಸುವ ಟೀ ಚಮಚವನ್ನುಬಳಸಬೇಡಿ. ಇದರಿಂದ ಸರಿಯಾದ ಅಳತೆ ಸಿಗುವುದಿಲ್ಲ.

ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”

ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಕೆಲವೊಮ್ಮೆ ಅವು ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು.

ಮೆಲಟೋನಿನ್ ಅನ್ನು ಅಲ್ಪಾವಧಿಗೆ ಬಳಸಿದಾಗ ಅದೊಂದು ಸುರಕ್ಷಿತ ಔಷಧವೆಂದು ಕಂಡು ಬಂದಿದ್ದು, ಅವು ಯಾವುದೇ ನಿರ್ದಿಷ್ಟ ಅಡ್ಡಪರಿಣಾಮಗಳನ್ನು ಉಂಟುಮಾಡುವುದಿಲ್ಲವೆಂದು ತಿಳಿದು ಬಂದಿದೆ. ಆದರೆ, ದೀರ್ಘಕಾಲದವರೆಗೆ ಬಳಸಿದಾಗ, ಅಂದರೆ, ಸುಮಾರು ವರ್ಷಗಳ ಕಾಲ ಇದನ್ನು ಬಳಸಿದಾಗ ತಲೆನೋವು, ಹಗಲಿನ ನಿದ್ರೆ, ಕಿರಿಕಿರಿ, ಹೊಟ್ಟೆಯ ಸೆಳೆತ ಅಥವಾ ಮನಸ್ಥಿತಿಯ ಬದಲಾವಣೆಗೆ ಕಾರಣವಾಗುತ್ತದೆ ಎಂದು ತಿಳಿದು ಬಂದಿದೆ. ಅಡ್ಡ ಪರಿಣಾಮಗಳನ್ನು ಕುರಿತು ಮಾಹಿತಿ ಪತ್ರವನ್ನು ದಯವಿಟ್ಟು ಓದಿ.

ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು (ರ‍್ಯಾಶ್) ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ.

ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಈ ಅಡ್ಡಪರಿಣಾಮಗಳ ಹೊರತಾಗಿಯೂ, ಮೆಲಟೋನಿನ್ ಒಂದು ಪರಿಣಾಮಕಾರಿ ಔಷಧವಾಗಿದೆ.

ಮೆಲಟೋನಿನ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?

  • ನೀವು ಮಗುವಿಗೆ ಪ್ಯಾರಸಿಟಮಾಲ್ ಅಥವಾ ಐಬುಪ್ರೊಫೇನ್ ಔಷಧಿಗಳನ್ನು ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ಮಗುವಿಗೆ ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.
  • ನಿಮ್ಮ ಮಗುವಿಗೆ ಬೇರೆ ಔಷಧಿಗಳನ್ನು ನೀಡುವ ಮೊದಲು ನಿಮ್ಮ ವೈದ್ಯರನ್ನೊಮ್ಮೆ ಸಂಪರ್ಕಿಸಿ. ಅದು ಗಿಡಮೂಲಿಕೆ ಅಥವಾ ಪೂರಕ ಔಷಧಿಗಳಾಗಿದ್ದರೂ ಸಹ ವೈದ್ಯರ ಸಲಹೆ ಇಲ್ಲದೆ ಮುಂದುವರೆಯಬೇಡಿ.
  • ಅಪಸ್ಮಾರಕ್ಕೆ ಚಿಕಿತ್ಸೆ ನೀಡಲು ಬಳಸುವ ಇತರ ಕೆಲವು ಔಷಧಿಗಳು ಮೆಲಟೋನಿನ್ ನಷ್ಟೇ ಉತ್ತಮವಾಗಿ ಕೆಲಸ ಮಾಡಬಹುದು ಅಥವಾ ಅಡ್ಡಪರಿಣಾಮಗಳಿಗೂ ಕಾರಣವಾಗಬಹುದು. ಹಾಗಾಗಿ, ಇತರೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ವೈದ್ಯರ ಗಮನಕ್ಕೆ ತನ್ನಿ. ಅಡ್ಡಪರಿಣಾಮಗಳ ಬಗ್ಗೆ ನಿಮಗೆ ಆತಂಕವಿದ್ದಲ್ಲಿ ಅಥವಾ ನಿಮ್ಮ ಮಗುವಿಗೆ ಹೆಚ್ಚು ಬಾರಿ ಫಿಟ್ಸ್ ಬರುತ್ತಿದ್ದಲ್ಲಿ, ವೈದ್ಯರನ್ನು ಸಂಪರ್ಕಿಸಿ

ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?

ಔಷಧಿಯನ್ನು

  • ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನುಫ್ರಿಡ್ಜ್‌ನಲ್ಲಿ ಇಡುವ ಅವಶ್ಯಕತೆ ಇಲ್ಲ.
  • ಮಕ್ಕಳು ಔಷಧಿಯನ್ನು ನೋಡದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.
  • ಖರೀದಿಸಿ ತಂದ ಬಾಕ್ಸ್ ನಲ್ಲಿಯೇ ಇಡಿ.

ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.

ಉಲ್ಲೇಖಗಳು:

  1. ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್‌ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
  2. ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
  3. ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್‌ಎಫ್‌ಸಿ)
  4. ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ; https://www.fda.gov
Picture of Dr C P Ravikumar

Dr C P Ravikumar

CONSULTANT – PEDIATRIC NEUROLOGY
Aster CMI Hospital, Bangalore