Dr C P Ravikumar

ಎಸ್ಲಿಕಾರ್ಬಜಿಪೈನ್

ಪೋಷಕರ ಅಥವಾ ರೋಗಿಯ ಮಾಹಿತಿ ಕೈಪಿಡಿ

ಡಾ ಸಿ ಪಿ ರವಿ ಕುಮಾರ್

ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ

MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)

ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)

ಬ್ರ್ಯಾಂಡ್ ನ ಹೆಸರುಗಳು

ಮಾತ್ರೆಗಳು: ಝೆಫ್ರೆಟೊಲ್, ಎಸ್ಲಿಝೇನ್

“ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು “

ಎಸ್ಲಿಕಾರ್ಬಜಿಪೈನ್ ಎಂಬುದ ಅಪಸ್ಮಾರದ ನಿಯಂತ್ರಣದ ಚಿಕಿತ್ಸೆಗೆ ಬಳಸುವ ಔಷಧಿ. ಇದನ್ನು ಏಕ ಔಷಧವಾಗಿ ಹಾಗೂ ಕೆಲವೊಮ್ಮೆ ಕಾರ್ಬಮಾಜೆಪೈನ್ ನೊಂದಿಗೂ ಬಳಸಲಾಗುತ್ತದೆ.

ಇದು ಕಾರ್ಬಮಾಜೆಪೈನ್ ಮತ್ತು ಆಕ್ಸ್ ಕಾರ್ಬಜೆಪೈನ್‌ನ ಕಿರಿಯ ಸಹೋದರ ಎಂದೇ ಹೇಳಬಹುದು. ಈ ಕುಟುಂಬದ ಔಷಧಿಗಳ ಅತಿದೊಡ್ಡ ಅಡ್ಡಪರಿಣಾಮವೆಂದರೆ ಚರ್ಮದ ತೀವ್ರ ಸಮಸ್ಯೆ ಸ್ಟೀವನ್ಸ್ ಜಾನ್ಸನ್) ಸಿಂಡ್ರೋಮ್ (ಆದರೆ, ಹೊಸ ಔಷಧಿಗಳಲ್ಲಿ ಈ ಗಂಭೀರ ಪ್ರತಿಕ್ರಿಯೆಯ ಅಪಾಯವು ಕಡಿಮೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಎಸ್ಲಿಕಾರ್ಬಜೆಪೈನ್. ತೆಗೆದುಕೊಳ್ಳುವ % 3-1 ವ್ಯಕ್ತಿಗಳಲ್ಲಿ ಮಾತ್ರ ಚರ್ಮದ ಸಮಸ್ಯೆ ಉಂಟಾಗುತ್ತದೆ. ಆದರೆ, ಅದು ತೀವ್ರ ಸ್ವರೂಪದ್ದಾಗಿರುವುದಿಲ್ಲ.

ನನ್ನ ಮಗು ಈ ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?

ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗು ಎಸ್ಲಿಕಾರ್ಬಜಿಪೈನ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.

ನಿಮ್ಮ ಮಗುವಿಗೆ ಔಷಧಿ ನೀಡುವುದನ್ನು ದಿಢೀರನೆ ನಿಲ್ಲಿಸಬೇಡಿ. ಇದರಿಂದ ಮಗುವಿನ ಫಿಟ್ಸ್ ಹೆಚ್ಚಾಗಬಹುದು.

ಎಸ್ಲಿಕಾರ್ಬಜಿಪೈನ್ ಯಾವ ರೂಪದಲ್ಲಿ ಲಭ್ಯವಿದೆ?

ಮಾತ್ರೆಗಳ ರೂಪದಲ್ಲಿ ಲಭ್ಯವಿದೆ

ಎಸ್ಲಿಕಾರ್ಬಜಿಪೈನ್ ಅನ್ನು ಯಾವಾಗ ನೀಡಬೇಕು?

ದಿನಕ್ಕೆ ಎರಡು ಬಾರಿ. ಬೆಳಗ್ಗೆ ಮತ್ತು ಸಂಜೆ ನೀಡಬಹುದು. ಆದರೆ, ಕನಿಷ್ಟ 10-12 ಗಂಟೆಗಳ ಅಂತರವಿರಲಿ.

ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು. ಕೆಲವೊಮ್ಮೆ ವೈದ್ಯರು ದಿನಕ್ಕೆ ಮೂರು ಬಾರಿ ಔಷಧಿ ನೀಡುವಂತೆ ಸೂಚಿಸಬಹುದು. ಅಂತಹ ಸಂದರ್ಭದಲ್ಲಿ ದಯವಿಟ್ಟು ನಿಮ್ಮ ವೈದ್ಯರ ಸಲಹೆಯನ್ನು ಅನುಸರಿಸಿ.

ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.

ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?

ಮಾತ್ರೆಗಳು: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.

ಯಾವುದೇ ಕಾರಣಕ್ಕೂ ಎರಡು ಡೋಸ್ ಎಸ್ಲಿಕಾರ್ಬಜಿಪೈನ್ ನೀಡಬೇಡಿ.

ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಔಷಧಿ ಸೇವಿಸಿದ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.

ಔಷಧಿಯ ಪ್ರಮಾಣ ಎಷ್ಟಿರಬೇಕು?

ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ಏನು ಮಾಡಬೇಕೆಂಬುದನ್ನುನಿಮ್ಮ ವೈದ್ಯರು ವಿವರಿಸುತ್ತಾರೆ.

ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ

ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.

ಔಷಧಿಯನ್ನು ಹೇಗೆ ನೀಡುವುದು? “ಔಷಧಿಗಳನ್ನು ನೀಡುವುದು”

ಮಾತ್ರೆಗಳು: ಇದನ್ನು ಒಂದು ಲೋಟ ನೀರು, ಜ್ಯೂಸ್ ಅಥವಾ ಹಾಲಿನೊಂದಿಗೆ ನುಂಗಬೇಕು. ಅಥವಾ ಇವುಗಳನ್ನು ಪುಡಿಮಾಡಿ ನೀರು ಅಥವಾ ರಸ ಅಥವಾ ಸಣ್ಣ ಪ್ರಮಾಣದ ಮೊಸರಿನೊಂದಿಗೆ ಸೇವಿಸಬಹುದು.

ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”

ನಮ್ಮ ಮಕ್ಕಳ ಆರೋಗ್ಯ ಉತ್ತಮಪಡಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಅವು ಕೆಲವೊಮ್ಮೆ ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು.್ಥೆ ಅಥವಾ ಅತಿಯಾದ ನಿದ್ರೆ, ವಾಕರಿಕೆ ಅಥವಾ ವಾಂತಿ, ತಲೆನೋವು, ಆಯಾಸ, ಅಟಾಕ್ಸಿಯಾ ಸಮಸ್ಯೆ.ಇದು ದ್ವಿ-ದೃಷ್ಟಿ ಅಥವಾ ಡಿಪ್ಲೋಪಿಯಾ, ಮಸುಕಾದ ದೃಷ್ಟಿಗೆ ಕಾರಣವಾಗುತ್ತದೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಕಾರ್ಬಮಾಜೆಪೈನ್ ನೊಂದಿಗೆ ಬಳಸಿದಾಗ ಈ ಅಡ್ಡಪರಿಣಾಮ ಉಂಟಾಗುತ್ತದೆ.

ಎಸ್ಲಿಕಾರ್ಬಜೆಪೈನ್ ದೀರ್ಘಕಾಲದ ಪಿಆರ್ ಮಧ್ಯಂತರದ ಅಪಾಯವನ್ನು ಹೊಂದಿರುತ್ತದೆ. ಆದ್ದರಿಂದ ಹೃದಯ ಸ್ಥಂಭನ ಅಥವಾ ಹೃದಯ ಬಡಿತದ ಸಮಸ್ಯೆಗಳಿರುವ ಯಾರಿಗೂ ಇದನ್ನು ಬಳಸಲು ಸೂಚಿಸಲಾಗುವುದಿಲ್ಲ.

ಯಕೃತ್ತಿನ ಕಾಯಿಲೆ: ಯಕೃತ್ತಿನ ಕಿಣ್ವಗಳ ಬಗ್ಗೆ ನಿಯಮಿತವಾಗಿ ಲಕ್ಷ್ಯವಿಡಬೇಕು. ಪಿತ್ತಜನಕಾಂಗದಲ್ಲಿ ಯಾವುದೇ ವ್ಯತ್ಯಾಸಗಳಗಾಗುವುದು ಕಂಡು ಬಂದಲ್ಲಿ, ತಕ್ಷಣವೇ ಔಷಧ ಸೇವನೆಯನ್ನು ನಿಲ್ಲಿಸಬೇಕು. ಯಾವುದೇ ನಿಮ್ಮ ಮಗು ಪ್ರತಿ ಕೆಲವು ಗಂಟೆಗಳಿಗೊಮ್ಮೆ ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭಿಸಿದಲ್ಲಿ, ಅಥವಾ ಹೊಟ್ಟೆ ನೋವು, ತುಂಬಾ ನಿದ್ರೆ, ಕಾಮಾಲೆ ಉಂಟಾದರೆ (ಚರ್ಮ ಅಥವಾ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ) ಅಥವಾ ಸಾಮಾನ್ಯಕ್ಕಿಂತ ಹೆಚ್ಚು ಬಾರಿ ಫಿಟ್ಸ್ ಗೆ ಒಳಗಾಗುತ್ತಿದ್ದಲ್ಲಿ, ಅವರನ್ನು ನಿಮ್ಮ ವೈದ್ಯರಿಗೆ ತೋರಿಸಿ ಅಥವಾ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯಿರಿ.

ನಿಮ್ಮ ಮಗುವಿನ ದೇಹದಲ್ಲಿ ದದ್ದುಗಳು ಅಥವಾ ಬಾಯಿಯಲ್ಲಿ / ಜನನಾಂಗದಲ್ಲಿ ಹುಣ್ಣುಗಳು ಕಂಡು ಬಂದರೆ, ತಕ್ಷಣ ಔಷಧಿ ನೀಡುವುದನ್ನು ನಿಲ್ಲಿಸಿ , ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ

ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಮೇಲೆ ವಿವರಿಸಿದ ಗಂಭೀರ ಪರಿಣಾಮವನ್ನು ನಾವು ತಡೆಗಟ್ಟಬಹುದೇ?

ವಂಶವಾಹಿ ಎಚ್‌ಎಲ್‌ಎ – ಬಿ 1502 ಹೊಂದಿರುವವರಿಗೆ ಈ ಮೇಲಿನ ಅಡ್ಡ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಿಗೆ ಇದ್ದು. ಆದರೆ, ಈ ಸಾಧ್ಯತೆಯನ್ನು ಪರೀಕ್ಷಿಸಲು ಅವಕಾಶವಿದೆ. ಅಂತಹ ಸಂದರ್ಭಗಳಲ್ಲಿ ಇದರ ಬಳಕೆಯನ್ನು ತಪ್ಪಿಸಬಹುದು.

ಎಸ್ಲಿಕಾರ್ಬಜಿಪೈನ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ??

• ನೀವು ಮಗುವಿಗೆ ಪ್ಯಾರಸಿಟಮಾಲ್ ಅಥವಾ ಐಬುಪ್ರೊಫೇನ್ ಔಷಧಿಗಳನ್ನು ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ಮಗುವಿಗೆ ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.

• ನಿಮ್ಮ ಮಗುವಿಗೆ ಬೇರೆ ಔಷಧಿಗಳನ್ನು ನೀಡುವ ಮೊದಲು ನಿಮ್ಮ ವೈದ್ಯರನ್ನೊಮ್ಮೆ ಸಂಪರ್ಕಿಸಿ. ಅದು ಗಿಡಮೂಲಿಕೆ ಅಥವಾ ಪೂರಕ ಔಷಧಿಗಳಾಗಿದ್ದರೂ ಸಹ ವೈದ್ಯರ ಸಲಹೆ ಇಲ್ಲದೆ ಮುಂದುವರೆಯಬೇಡಿ.

• ಅಪಸ್ಮಾರಕ್ಕೆ ಚಿಕಿತ್ಸೆ ನೀಡಲು ಬಳಸುವ ಇತರ ಕೆಲವು ಔಷಧಿಗಳು ಎಸ್ಲಿಕಾರ್ಬಜಿಪೈನ್ ನಷ್ಟೇ ಉತ್ತಮವಾಗಿ ಕೆಲಸ ಮಾಡಬಹುದು ಅಥವಾ ಅಡ್ಡಪರಿಣಾಮಗಳಿಗೂ ಕಾರಣವಾಗಬಹುದು. ಹಾಗಾಗಿ, ಇತರೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ವೈದ್ಯರ ಗಮನಕ್ಕೆ ತನ್ನಿ. ಅಡ್ಡಪರಿಣಾಮಗಳ ಬಗ್ಗೆ ನಿಮಗೆ ಆತಂಕವಿದ್ದಲ್ಲಿ ಅಥವಾ ನಿಮ್ಮ ಮಗುವಿಗೆ ಹೆಚ್ಚು ಬಾರಿ ಫಿಟ್ಸ್ ಬರುತ್ತಿದ್ದಲ್ಲಿ, ವೈದ್ಯರನ್ನು ಸಂಪರ್ಕಿಸಿ.

ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?

ಔಷಧಿಯನ್ನು…

• ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನು ಫ್ರಿಡ್ಜ್ ನಲ್ಲಿ ಇಡುವ ಅವಶ್ಯಕತೆ ಇಲ್ಲ.

• ಮಕ್ಕಳ ಕಣ್ಣಿಗೆ ಕಾಣಿಸದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.

• ಖರೀದಿಸಿ ತಂದ ಬಾಕ್ಸ್ ನಲ್ಲಿಯೇ ಇಡಿ.

ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿ ಯನ್ನು ನೋಡಿ.

ಉಲ್ಲೇಖಗಳು:

  1. ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
  2. ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
  3. ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್ಎಫ್ಸಿ)
  4. ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ, https://www.fda.gov
Dr C P Ravikumar

Dr C P Ravikumar

CONSULTANT – PEDIATRIC NEUROLOGY
Aster CMI Hospital, Bangalore