Dr C P Ravikumar

ಕ್ಯಾನಬಿಡಿಯೊಲ್

ಪೋಷಕರ ಅಥವಾ ರೋಗಿಯ ಮಾಹಿತಿ ಕೈಪಿಡಿ

 
 

ಡಾ ಸಿ ಪಿ ರವಿ ಕುಮಾರ್

ಸಲಹೆಗಾರ – ಪೀಡಿಯಾಟ್ರಿಕ್ ನ್ಯೂರಾಲಜಿ
MRCPCH, ಪೀಡಿಯಾಟ್ರಿಕ್ಸ್‌ನಲ್ಲಿ CCT (U.K.)
ಪೀಡಿಯಾಟ್ರಿಕ್ ಎಪಿಲೆಪ್ಸಿಯಲ್ಲಿ ಫೆಲೋ & ನರವಿಜ್ಞಾನ (ಲಂಡನ್)

ಪ್ರಸ್ತುತ ಕೈಪಿಡಿಯು ಪ್ರಕಟಗೊಳ್ಳುವ ವೇಳೆಯಲ್ಲಿ ಭಾರತದಲ್ಲಿ ಈ ಔಷಧಿಯನ್ನು ಮಾರಾಟ ಮಾಡಲಾಗುವುದಿಲ್ಲ.

“ಜೆನೆರಿಕ್ Vs ಬ್ರ್ಯಾಂಡೆಡ್ ಔಷಧಿಗಳು”

ಕ್ಯಾನಬಿಡಿಯೊಲ್ ಎಂಬುದು ಅಪಸ್ಮಾರ ಚಿಕಿತ್ಸೆಗಾಗಿ ಬಳಸುವ ಔಷಧವಾಗಿದೆ. ಇದನ್ನು ಸಾಮಾನ್ಯವಾಗಿ ರೂಢಿಯಲ್ಲಿರುವ/ ಸಾಮಾನ್ಯ ಔಷಧಿಗಳಿಗೆ ಸ್ಪಂದಿಸದ, ತೀವ್ರ ಸ್ವರೂಪದ ಅಪಸ್ಮಾರ ಹೊಂದಿರುವ ವ್ಯಕ್ತಿಗಳ ಚಿಕಿತ್ಸೆಗಾಗಿ ಬಳಸಲಾಗುತ್ತದೆ.

ಈ ಔಷಧವು ಕೆಲವು ಸಿಂಡ್ರೋಮಿಕ್ ಅಪಸ್ಮಾರಗಳಾದ ಡ್ರಾವೆಟ್ ಸಿಂಡ್ರೋಮ್ ಮತ್ತು ಲೆನಾಕ್ಸ್ ಗ್ಯಾಸ್ಟಾಟ್ ಸಿಂಡ್ರೋಮ್ ನ ಚಿಕಿತ್ಸೆಯಲ್ಲಿ ಪರಿಣಾಮಕಾರಿ ಎಂದು ಕಂಡುಬಂದಿದೆ.

ನನ್ನ ಮಗು ಔಷಧಿ ತೆಗೆದುಕೊಳ್ಳುವುದು ಏಕೆ ಮುಖ್ಯ?

ಫಿಟ್ಸ್ ಬರುವುದನ್ನು ಕಡಿಮೆ ಮಾಡಲು ಅಥವಾ ಸಂಪೂರ್ಣವಾಗಿ ತಡೆಯಲು ನಿಮ್ಮ ಮಗುವು ಕ್ಯಾನಬಿಡಿಯೊಲ್ ಔಷಧಿ ತೆಗೆದುಕೊಳ್ಳುವುದು ತುಂಬಾ ಮುಖ್ಯ.

ಕ್ಯಾನಬಿಡಿಯೊಲ್ ನೀಡುವುದನ್ನು ದಿಢೀರನೇ ನಿಲ್ಲಿಸಬೇಡಿ, ಇದರಿಂದ ನಿಮ್ಮ ಮಗುವಿನ ಫಿಟ್ಸ್ ಇನ್ನಷ್ಟು ಹೆಚ್ಚಾಗಬಹುದು.

ಕ್ಯಾನಬಿಡಿಯೊಲ್ ಯಾವ ರೂಪದಲ್ಲಿ ಲಭ್ಯವಿದೆ?

ದ್ರವ ರೂಪದಲ್ಲಿ ಲಭ್ಯವಿದೆ

ಕ್ಯಾನಬಿಡಿಯೊಲ್ ಅನ್ನು ಯಾವಾಗ ನೀಡಬೇಕು?

ದಿನಕ್ಕೆ ಎರಡು ಬಾರಿ. ಬೆಳಗ್ಗೆ ಮತ್ತು ಸಂಜೆ ನೀಡಬಹುದು. ಆದರೆ, ಕನಿಷ್ಟ 10-12 ಗಂಟೆಗಳ ಅಂತರವಿರಲಿ.

ಉದಾಹರಣೆಗೆ, ಬೆಳಗ್ಗೆ 7 ರಿಂದ 8 ಗಂಟೆ ನಡುವೆ ಅಥವಾ ಸಂಜೆ 7 ರಿಂದ 8 ಗಂಟೆ ನಡುವಿನ ಸಮಯದಲ್ಲಿ ನೀಡಬಹುದು. ಕೆಲವೊಮ್ಮೆ ವೈದ್ಯರು ದಿನಕ್ಕೆ ಮೂರು ಬಾರಿ ಔಷಧಿ ನೀಡುವಂತೆ ಸೂಚಿಸಬಹುದು. ಅಂತಹ ಸಂದರ್ಭದಲ್ಲಿ ದಯವಿಟ್ಟು ನಿಮ್ಮ ವೈದ್ಯರ ಸಲಹೆಯನ್ನ ಅನುಸರಿಸಿ.

ಪ್ರತಿದಿನ ನಿಗದಿತ ಸಮಯಕ್ಕೆ ಔಷಧಿ ನೀಡಬೇಕು. ಇದರಿಂದ ಔಷಧಿ ಕೊಡುವುದು ರೂಢಿಯಾಗಿ ಮರೆತು ಹೋಗುವ ಸಂಭವಗಳು ಕಡಿಮೆಯಾಗುತ್ತವೆ.

ಔಷಧಿ ಕೊಡುವುದನ್ನುಮರೆತರೆ ಏನು ಮಾಡಬೇಕು?

ದ್ರವೌಷಧಿ: ಒಂದು ವೇಳೆ ನಿಮಗೆ ಆರು ಗಂಟೆಗಳ ಒಳಗಾಗಿ ನೆನಪಾದರೆ ನಿಮ್ಮ ಮಗುವಿಗೆ ತಪ್ಪಿ ಹೋದ ಡೋಸ್ ನೀಡಿ. ಆರು ಗಂಟೆಗಳ ನಂತರ ನೆನಪಾದರೆ ತಪ್ಪಿಹೋದ ಡೋಸ್ ನೀಡಬೇಡಿ. ನಿಯಮಿತವಾಗಿ ನಿಗದಿತ ಡೋಸ್ ನೀಡುವ ಸಮಯದವರೆಗೂ ಕಾಯಿರಿ.

ಯಾವುದೇ ಕಾರಣಕ್ಕೂ ಎರಡು ಡೋಸ್ ಕ್ಯಾನಬಿಡಿಯೊಲ್ ನೀಡಬೇಡಿ.

ಔಷಧಿಯ ಒಂದು ಡೋಸ್ ತೆಗೆದುಕೊಂಡ 30 ನಿಮಿಷಗಳ ಒಳಗೆ ನಿಮ್ಮ ಮಗು ವಾಂತಿ ಮಾಡಿಕೊಂಡರೆ ಮತ್ತೆ ಇನ್ನೊಂದು ಡೋಸ್ ನೀಡಿ; ಒಂದು ವೇಳೆ ಮಗುವು ಔಷಧಿ ತೆಗೆದುಕೊಂಡ 30 ನಿಮಿಷಗಳ ನಂತರ ವಾಂತಿ ಮಾಡಿಕೊಂಡರೆ ಮತ್ತೊಮ್ಮೆ ಅದನ್ನು ನೀಡುವುದು ಬೇಡ.

ಔಷಧಿಯ ಪ್ರಮಾಣ ಎಷ್ಟಿರಬೇಕು?

ನಿಮ್ಮ ಮಗುವಿಗೆ ಎಷ್ಟು ಪ್ರಮಾಣದಲ್ಲಿ ಕ್ಯಾನಬಿಡಿಯೊಲ್ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ನೀಡಬೇಕಾದ ಔಷಧಿಯ ಪ್ರಮಾಣವನ್ನು ಸಾಮಾನ್ಯವಾಗಿ ಔಷಧಿ ಚೀಟಿಯಲ್ಲಿ ಬರೆದಿರಲಾಗುತ್ತದೆ.

ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕ್ಯಾನಬಿಡಿಯೊಲ್ ನೀಡಿ. ಕೆಲವು ದಿನಗಳು ಅಥವಾ ವಾರಗಳ ನಂತರ ಔಷಧಿಯ ಪ್ರಮಾಣವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಾ ಹೋಗಬೇಕಾಗುತ್ತದೆ. ಇದಕ್ಕೆ ನಿಮ್ಮ ವೈದ್ಯರ ಸಲಹೆಯನ್ನು ಪಾಲಿಸಿ. ಇದರಿಂದ ನಿಮ್ಮ ಮಗು ಔಷಧಿಗೆ ಹೊಂದಿಕೊಳ್ಳುತ್ತದೆ. ನಂತರ ಏನು ಮಾಡಬೇಕೆಂಬುದನ್ನುನಿಮ್ಮ ವೈದ್ಯರು ವಿವರಿಸುತ್ತಾರೆ.

ಎಷ್ಟು ಔಷಧಿ ಕೊಡಬೇಕೆಂದು ನಿಮ್ಮ ವೈದ್ಯರು ಸೂಚಿಸುತ್ತಾರೋ ಅದನ್ನು ಪಾಲಿಸುವುದು ಮುಖ್ಯ

ನಿಮ್ಮ ಮಗು ಫಿಟ್ಸ್ ನಿಂದ ಮುಕ್ತವಾದರೆ ಅಥವಾ ಯಾವುದೇ ಅಡ್ಡಪರಿಣಾಮಗಳು ಇಲ್ಲವೆಂದರೆ ಔಷಧಿಯ ಪ್ರಮಾಣ ಸರಿಯಾಗಿದೆ ಎಂದರ್ಥ.

ಔಷಧಿಯನ್ನು ಹೇಗೆ ನೀಡಬೇಕು? ? ಔಷಧಿಗಳನ್ನು ನೀಡುವುದು”

ದ್ರವ ಅಥವಾ ಸಿರಪ್: ಓರಲ್ ಸಿರಿಂಜ್ ಅಥವಾ ಔಷಧಿ ಚಮಚದಿಂದ ಸರಿಯಾದ ಪ್ರಮಾಣದ ಔಷಧಿಯನ್ನು ಅಳತೆ ಮಾಡಿಕೊಳ್ಳಿ. ಇದನ್ನು ಔಷಧಿ ಅಂಗಡಿಗಳಲ್ಲಿ ಖರೀದಿಸಬಹುದು. ಅಡುಗೆಮನೆಯಲ್ಲಿ ಬಳಸುವ ಟೀ ಚಮಚವನ್ನುಬಳಸಬೇಡಿ. ಇದರಿಂದ ಸರಿಯಾದ ಅಳತೆ ಸಿಗುವುದಿಲ್ಲ.

ಇದರಿಂದ ಏನಾದರೂ ಅಡ್ಡಪರಿಣಾಮಗಳಾಗುವ ಸಾಧ್ಯತೆ ಇದೆಯೇ? “ಅಡ್ಡಪರಿಣಾಮಗಳು”

ನಮ್ಮ ಮಕ್ಕಳ ಆರೋಗ್ಯವನ್ನು ಉತ್ತಮಗೊಳಿಸಲು ನಾವು ಔಷಧಿಗಳನ್ನು ಬಳಸುತ್ತೇವೆ. ಆದರೆ, ಕೆಲವೊಮ್ಮೆ ಅವು ಅನಗತ್ಯ ಪರಿಣಾಮಗಳನ್ನು (ಅಡ್ಡಪರಿಣಾಮಗಳು) ಉಂಟು ಮಾಡಬಹುದು. ಅಡ್ಡ ಪರಿಣಾಮಗಳನ್ನು ಕುರಿತು ಮಾಹಿತಿ ಪತ್ರವನ್ನು ದಯವಿಟ್ಟು ಓದಿ.

ನಿಮ್ಮ ಚಿಂತೆಗೆ ಕಾರಣವಾಗಬಹುದಾದ ಅಡ್ಡಪರಿಣಾಮಗಳುಅಪರೂಪ

ಈ ಔಷಧದಿಂದ ಅತಿಸಾರವು ಸಾಮಾನ್ಯವಾಗಿ ಉಂಟಾಗುವ ಅಡ್ಡಪರಿಣಾಮವಾಗಿದೆ. ಆದರೆ, ಇಲ್ಲಿ ಔಷಧದಿಂದ ಉಂಟಾಗುವ ಅಡ್ಡ ಪರಿಣಾಮಕ್ಕಿಂತ ಅದರ ಸಂರಕ್ಷಕವಾಗಿ ಬಳಸುವ ಎಣ್ಣೆಯಿಂದಾಗಿ ಅಡ್ಡ ಪರಿಣಾಮ ಉಂಟಾಗುತ್ತದೆ. ಇದನ್ನು ತಡೆಗಟ್ಟಲು ಹೊಸ ವಿಧಾನಗಳನ್ನು ಪರಿಚಯಿಸಲಾಗುತ್ತಿದೆ.

ಯಕೃತ್ತಿನ ಕಾಯಿಲೆ: ಯಕೃತ್ತಿನ ಕಿಣ್ವಗಳ ಬಗ್ಗೆ ನಿಯಮಿತವಾಗಿ ಲಕ್ಷ್ಯವಿಡಬೇಕು. ಪಿತ್ತಜನಕಾಂಗದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ, ತಕ್ಷಣವೇ ಔಷಧ ಸೇವನೆಯನ್ನು ನಿಲ್ಲಿಸಬೇಕು. ನಿಮ್ಮ ಮಗು ಪ್ರತಿ ಕೆಲವು ಗಂಟೆಗಳಿಗೊಮ್ಮೆ ಅನಾರೋಗ್ಯಕ್ಕೆ ಒಳಗಾಗಲು ಪ್ರಾರಂಭಿಸಿದರೆ, ಅಥವಾ ಹೊಟ್ಟೆ ನೋವು, ತುಂಬಾ ನಿದ್ರೆ, ಕಾಮಾಲೆ (ಚರ್ಮ ಅಥವಾ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ) ಉಂಟಾದರೆ ಅಥವಾ ಸಾಮಾನ್ಯಕ್ಕಿಂತ ಹೆಚ್ಚು ಬಾರಿ ಫಿಟ್ಸ್ ಗೆ ಒಳಗಾಗುತ್ತಿದ್ದರೆ, ಅವರನ್ನು ನಿಮ್ಮ ವೈದ್ಯರಿಗೆ ತೋರಿಸಿ ಅಥವಾ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯಿರಿ.

ಇತರೆ ಅಡ್ಡ ಪರಿಣಾಮಗಳು

ನಿಮ್ಮ ಮಗುವು ಕ್ಯಾನಬಿಡಿಯೊಲ್ ತೆಗೆದುಕೊಳ್ಳಲು ಪ್ರಾರಂಭಿಸಿದಾಗ ಈ ಕೆಳಗಿನ ಅಡ್ಡಪರಿಣಾಮಗಳು ಉಂಟಾಗಬಹುದು. ಆದರೆ, ಸಾಮಾನ್ಯವಾಗಿ ಒಂದು ವಾರದೊಳಗೆ ಅಥವಾ ಅವರ ದೇಹವು ಔಷಧಿಗೆ ಹೊಂದಿಕೊಂಡಂತೆ ಸರಿ ಹೋಗುತ್ತದೆ ನಿಮ್ಮ ವೈದ್ಯರು ಹೇಳಿದಂತೆ ನಿಮ್ಮ ಮಗುವಿಗೆ ಕ್ಯಾನಬಿಡಿಯಾಲ್ ನೀಡುವುದನ್ನು ಮುಂದುವರೆಸಿ.

  • ನಿದ್ರೆ ಹೆಚ್ಚಾಗಬಹುದು ಅಥವಾ ಅರೆನಿದ್ರಾವಸ್ಥೆ
  • ಹಸಿವು ಕಡಿಮೆಯಾಗಬಹುದು
  • ಆಯಾಸ, ಅಸ್ವಸ್ಥತೆಗಳುಂಟಾಗಬಹುದು
  • ನಿದ್ರಾಹೀನತೆ ಮತ್ತು ನಿದ್ರೆಯ ಇತರ ತೊಂದರೆಗಳು ಕಾಣಿಸಿಕೊಳ್ಳಬಹುದು

ನಿಮ್ಮ ಮಗುವಿಗೆ ದೇಹದಲ್ಲಿ ದದ್ದುಗಳು ಉಂಟಾದರೆ, ಔಷಧಿ ನೀಡುವುದನ್ನು ನಿಲ್ಲಿಸಿ ಮತ್ತು ತಕ್ಷಣ ವೈದ್ಯರಿಂದ ಸಲಹೆ ಪಡೆಯಿರಿ.

ಕೆಲವೊಮ್ಮೆ, ಈ ಮೇಲೆ ಪಟ್ಟಿ ಮಾಡಿದ ಅಡ್ಡಪರಿಣಾಮಗಳನ್ನು ಹೊರತುಪಡಿಸಿ ಇತರೆ ಅಡ್ಡಪರಿಣಾಮಗಳು ಸಹ ಉಂಟಾಗಬಹುದು. ಅಂತಹ ಅಸಾಮಾನ್ಯವಾದುದು ನಿಮ್ಮ ಗಮನಕ್ಕೆ ಬಂದರೆ ಮತ್ತು ಈ ಕುರಿತು ನಿಮಗೆ ಯಾವುದೇ ಅನುಮಾನಗಳಿದ್ದಲ್ಲಿ,/ ಆತಂಕವಿದ್ದಲ್ಲಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ.

ಕ್ಯಾನಬಿಡಿಯೊಲ್ ನೀಡುವ ಸಮಯದಲ್ಲಿ ಇತರೆ ಸಾಮಾನ್ಯ ಔಷಧಿಗಳನ್ನು ನೀಡಬಹುದೇ?

  • ಪ್ಯಾರಾಸಿಟಮೆಲ್ ಅಥವಾ ಇಬುಪ್ರೊಫೆನ್‌ವುಳ್ಳ ಔಷಧಿಗಳು, ಆಂಟಿಬಯಾಟಿಕ್ಸ್ ಅಥವಾ ಇತರೆ ಸಾಮಾನ್ಯ ಔಷಧಿಗಳನ್ನು ನಿಮ್ಮ ಮಗುವಿಗೆ ನೀಡಬಹುದು. ಆದರೆ, ಪ್ರತಿಜೀವಕ ಅಂಶಗಳನ್ನೊಳಗೊಂಡ ಔಷಧಿ ಮತ್ತು ಮೆಡಿಕಲ್ ಸ್ಟೋರ್ ನಲ್ಲಿ ಕೊಂಡ ಇತರೆ ಔಷಧಿಗಳನ್ನು ಮಗುವಿಗೆ ನೀಡುವ ಮುನ್ನ ವೈದ್ಯರ ಸಲಹೆ ಪಡೆಯಿರಿ.

  • ನಿಮ್ಮ ಮಗುವಿಗೆ ಬೇರೆ ಔಷಧಿಗಳನ್ನು ನೀಡುವ ಮೊದಲು ನಿಮ್ಮ ವೈದ್ಯರನ್ನೊಮ್ಮೆ ಸಂಪರ್ಕಿಸಿ. ಅದು ಗಿಡಮೂಲಿಕೆ ಅಥವಾ ಪೂರಕ ಔಷಧಿಗಳಾಗಿದ್ದರೂ ಸಹ ವೈದ್ಯರ ಸಲಹೆ ಇಲ್ಲದೆ ಮುಂದುವರೆಯಬೇಡಿ.
  • ಅಪಸ್ಮಾರಕ್ಕೆ ಚಿಕಿತ್ಸೆ ನೀಡಲು ಬಳಸುವ ಇತರ ಕೆಲವು ಔಷಧಿಗಳು ಕ್ಯಾನಬಿಡಿಯೊಲ್ ನಷ್ಟೇ ಉತ್ತಮವಾಗಿ ಕೆಲಸ ಮಾಡಬಹುದು ಅಥವಾ ಅಡ್ಡಪರಿಣಾಮಗಳಿಗೂ ಕಾರಣವಾಗಬಹುದು. ಹಾಗಾಗಿ, ಇತರೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ವೈದ್ಯರ ಗಮನಕ್ಕೆ ತನ್ನಿ. ಅಡ್ಡಪರಿಣಾಮಗಳ ಬಗ್ಗೆ ನಿಮಗೆ ಆತಂಕವಿದ್ದಲ್ಲಿ ಅಥವಾ ನಿಮ್ಮ ಮಗುವಿಗೆ ಹೆಚ್ಚು ಬಾರಿ ಫಿಟ್ಸ್ ಬರುತ್ತಿದ್ದಲ್ಲಿ, ವೈದ್ಯರನ್ನು ಸಂಪರ್ಕಿಸಿ.

ಔಷಧಿಯನ್ನು ಎಲ್ಲಿ ಸಂರಕ್ಷಿಸಿ ಇಡಬೇಕು?

ಔಷಧಿಯನ್ನು

  • ಸೂರ್ಯನ ಕಿರಣ ಮತ್ತು ಉಷ್ಣತೆಯಿಂದ ದೂರವಿರುವಂತೆ ಕಬೋರ್ಡ್ ನಲ್ಲಿ ಇಡಿ. ಇದನ್ನುಫ್ರಿಡ್ಜ್‌ನಲ್ಲಿ ಇಡುವ ಅವಶ್ಯಕತೆ ಇಲ್ಲ.
  • ಮಕ್ಕಳು ಔಷಧಿಯನ್ನು ನೋಡದಂತೆ ಅಥವಾ ಅವರ ಕೈಗೆಟುಕದಂತೆ ನೋಡಿಕೊಳ್ಳಿ.
  • ಖರೀದಿಸಿ ತಂದ ಬಾಕ್ಸ್ ನಲ್ಲಿಯೇ ಇಡಿ.

ಸಂಪೂರ್ಣ ಮಾಹಿತಿಗಾಗಿ ಉತ್ಪಾದಕರ ಮಾಹಿತಿ ಕೈಪಿಡಿಯನ್ನು ನೋಡಿ.

ಉಲ್ಲೇಖಗಳು:

  1. ಐಎಪಿ ಡ್ರಗ್ ಫಾರ್ಮುಲರಿ ವೆಬ್ ಅಪ್‌ಡೇಟ್ 2020 (3) ಆವೃತ್ತಿ 58, https://www.iapdrugformulary.com/Home
  2. ಗ್ರಾಹಕ ಔಷಧಿಗಳ ಮಾಹಿತಿ (ಸಿಎಮ್ಐ), https://www.tga.gov.au/consumer-medicines-information-cmi
  3. ಬ್ರಿಟಿಷ್ ಮಕ್ಕಳ ರಾಷ್ಟ್ರೀಯ ಫಾರ್ಮುಲರಿ (ಬಿಎನ್‌ಎಫ್‌ಸಿ)
  4. ಅಮೆರಿಕಾನ್ ಆಹಾರ ಮತ್ತು ಔಷಧಿಗಳ ಆಡಳಿತ, ಯುಎಸ್ಎ; https://www.fda.gov
Dr C P Ravikumar

Dr C P Ravikumar

CONSULTANT – PEDIATRIC NEUROLOGY
Aster CMI Hospital, Bangalore